ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಡೆ ಪರವಾನಿಗೆ ಇಲ್ಲದೆ ಸರ್ಕಾರದ ಸ್ವತ್ತಾದ ಮರಳನ್ನು ಸಾಗಿಸುತ್ತಿದ್ದಾರೆ. ಆದರೆ ಈ ಬಗ್ಗೆ ಯಾರೂ ಕೂಡ ಧ್ವನಿ ಎತ್ತುತ್ತಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಪೊಲೀಸರು ಈಗ ಫುಲ್ ಅಲರ್ಟ್ ಆಗುತ್ತಿದ್ದಾರೆ.
ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಪರವಾನಿಗೆ ಇಲ್ಲದೆ ಮರಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ. ಬಂಟ್ವಾಳ ತಾಲೂಕು ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ಕೆಎ 21 ಬಿ 2156 ಲಾರಿಯೊಂದನ್ನು ತಡೆದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲಾರಿಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮ ಮರಳು ಸಾಗಾಟ ನಡೆಸುತ್ತಿರುವುದು ಕಂಡು ಬಂದಿದೆ. ವಳಚ್ಚಿಲ್ ಎಂಬಲ್ಲಿನ ಹೊಳೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಕಂಡು ಬಂದಿದೆ. ಲಾರಿ ಚಾಲಕ ಸಮೀರ್ ಹಾಗೂ ಆರೋಪಿ ಚಾಲಕ ಹಮೀದ್ ಎಂಬವರ ವಿರುದ್ಧ ಅ.ಕ್ರ ನಂಬ್ರ 25/2024 ಕಲಂ;379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.