ನ್ಯೂಸ್ ನಾಟೌಟ್: ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಯುವಕನೋರ್ವ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ(ಫೆ.19) ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪುತ್ತೂರಿನ ನಿಶ್ಚಿತ್ (25) ಎಂದು ಗುರುತಿಸಲಾಗಿದೆ.
ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿಗಳು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.