ನ್ಯೂಸ್ ನಾಟೌಟ್:ಲೋಕಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದೆ.ಹೀಗಾಗಿ ಇದಕ್ಕಾಗಿ ತಯಾರಿಗಳು ಕೂಡ ತೆರೆಮರೆಯಲ್ಲಿ ನಡೆಯುತ್ತಿದೆ. ಇದೀಗ ಮಾ.1 ಅಥವಾ 2ರಂದು ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತದೆ.ಈ ಕುರಿತು ಇಂದು (ಫೆ.೨೯)ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ನಿರ್ಣಾಯಕ ಸಭೆ ನಡೆಯಲಿದೆ ಎಂಬ ಮಾಹಿತಿಯಿದೆ.
ಪಕ್ಷವು ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಿದೆ ಎನ್ನಲಾಗಿದ್ದು,ಮೊದಲ ಪಟ್ಟಿಯಲ್ಲಿ ಪ್ರಧಾನಿ ಮೋದಿ,ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರುಗಳು ಇರುವ ನಿರೀಕ್ಷೆಯಿದೆ.ಮೋದಿ ಅವರು ಮತ್ತೂಮ್ಮೆ ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ಉತ್ತರ ಪ್ರದೇಶದಲ್ಲಿ ಬಿಜೆಪಿ 62 ಸಂಸದರನ್ನು ಹೊಂದಿದೆ.ಹೀಗಾಗಿ ಈ ಬಗ್ಗೆ ಅಧ್ಯಯನವನ್ನು ಮಾಡಲಾಗುತ್ತಿದೆ.ಅಂದ್ರೆ ಕಾರ್ಯ ಕ್ಷಮತೆ ತೋರದ, ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಅರ್ಧದಷ್ಟು ಸಂಸದರಿಗೆ ಟಿಕೆಟ್ ನಿರಾಕರಿಸಲು ಪಕ್ಷ ಯೋಚನೆ ಮಾಡಿದ್ದು, ಹೊಸಬರನ್ನು ಕಣಕ್ಕಿಳಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.