ನ್ಯೂಸ್ ನಾಟೌಟ್:ಇತ್ತೀಚೆಗೆ ಸುಂಟಿಕೊಪ್ಪದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿ ಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.ಈತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕಮುಟ್ನೂರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.
ಮೊಹಮ್ಮದ್ ಅಶ್ರಫ್ (43) ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿಂದ 15 ಸಾವಿರ ರೂ. ನಗದು, ವಾಚ್ ಮತ್ತು ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ.ಸುಂಟಿಕೊಪ್ಪದ ನಿವಾಸಿ ಕೆ.ಎಂ. ಹಸೈನಾರ್ ಅವರ ಟಿನೇಜ್ ಕಲೆಕ್ಷನ್ಸ್ ಬಟ್ಟೆ ಅಂಗಡಿಯ ಬೀಗವನ್ನು ಮುರಿದು ಕ್ಯಾಶ್ ಟೇಬಲ್ನಲ್ಲಿದ್ದ 1ಲಕ್ಷ ರೂ. ನಗದು, ವಾಚ್ ಮತ್ತು ಬಟ್ಟೆಗಳನ್ನು ಕಳ್ಳತನ ಮಾಡಲಾಗಿತ್ತು.
ಅಲ್ಲದೇ ಸುರೇಶ್ ಎಚ್.ಕೆ. ಅವರ ಎ.ಆರ್. ಕನ್ಸಲ್ಟಿಂಗ್ ಅಂಗಡಿಯ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನೂ ಕದ್ದೊಯ್ಯಲಾಗಿತ್ತು.ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಚೋರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದರು. ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್ ಕೆ., ಸುಂಟಿಕೊಪ್ಪ ಠಾಣೆಯ ಪಿಎಸ್ಐಗಳಾದ ಶ್ರೀಧರ್ಎಂ.ಸಿ., ನಾಗರಾಜು ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.