ನ್ಯೂಸ್ ನಾಟೌಟ್ : ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಸೋಮವಾರ(ಜ.6) ನಡೆದಿದೆ.
ಮೃತ ಯುವಕನನ್ನು ಮಡಿಕೇರಿ ಗಣಪತಿ ಬೀದಿ ನಿವಾಸಿ ಸಾಜಿದ್ (22) ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಸಾಜಿದ್, ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ಗೆ ಬೈಕ್ ಸರ್ವಿಸ್ ಮಾಡಲೆಂದು ಸಾಜೀದ್ ಆಗಮಿಸಿದ್ದನು. ಈ ವೇಳೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎಂದು ವರದಿ ತಿಳಿಸಿದೆ.
ಆರೋಪಿ ಶ್ರೀನಿಧಿ ಚೂರಿಯಿಂದ ಇರಿದಿದ್ದ ಎನ್ನಲಾಗಿದೆ. ಗಂಭೀರ ಗಾಯಗೊಂಡ ಸಾಜಿದ್ ನನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿಯನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.