ನ್ಯೂಸ್ ನಾಟೌಟ್ : ಕನ್ನಡ ಮತ್ತು ಸಂಸೃತಿ ಇಲಾಖೆ ರಾಷ್ಟ್ರಕವಿ ಕುವೆಂಪು ರಚಿಸಿದ ನಾಡಗೀತೆಯ ಬಗ್ಗೆ ವಿವಾದಿತ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಎನ್ನಲಾಗಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.
ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.
ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ ಎನ್ನಲಾಗಿದೆ.