- +91 73497 60202
- [email protected]
- November 27, 2024 7:11 PM
ನ್ಯೂಸ್ ನಾಟೌಟ್: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ಬಿಐ ಹೆಸರು ಹೇಳಿಕೊಂಡು ಬ್ಯಾಂಕ್ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡಿರುವ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ಆ್ಯಂಡ್ ಗ್ಯಾಂಗ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಟ್ರಸ್ಗೆ ಆರ್ಬಿಐನಿಂದ 17 ಕೋಟಿ ಬಂದಿರುವುದಾಗಿ ಹಾಗೂ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಸಹಿ ಇರುವ ನಕಲಿ ಕಾಪಿ ತೋರಿಸಿ ಚಂದಾಪುರು, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ ಎನ್ನಲಾಗಿದೆ. ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು. ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದಾಳೆ. ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ. ಈ ದಿಕ್ಕು ತೋಚದೆ ದೂರು ನೀಡಿದ್ದಾರೆ. ಆದರೆ, ಕೆಲವು ತಿಂಗಳಾದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಲಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ