ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದ ಸರ್ಕಾರ ಯೂ-ಟರ್ನ್..? ಸರ್ಕಾರದ ಆದೇಶ ಪ್ರತಿಯಲ್ಲಿ ‘ಪ್ರಿಂಟ್ ಮಿಸ್ಟೇಕ್’ ಆಗಿದೆ ಎಂದ ಸಚಿವ..!

ನ್ಯೂಸ್‌ ನಾಟೌಟ್‌ : ಕನ್ನಡ ಮತ್ತು ಸಂಸೃತಿ ಇಲಾಖೆ ರಾಷ್ಟ್ರಕವಿ ಕುವೆಂಪು ರಚಿಸಿದ ನಾಡಗೀತೆಯ ಬಗ್ಗೆ ವಿವಾದಿತ ಆದೇಶ ಹೊರಡಿಸಿತ್ತು. ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನಾವು ನೀಡಿದ ಆದೇಶ ಪ್ರತಿಯಲ್ಲಿ ಮುದ್ರಣದಲ್ಲಿ ತಪ್ಪಾಗಿದೆ. ಎಲ್ಲಾ ಶಾಲೆಗಳಿಗೂ ನಾಡಗೀತೆ ಹಾಡುವುದರಲ್ಲಿ ಬದಲಾವಣೆ ಇಲ್ಲ ಎಂದು ತೇಪೆ ಹಚ್ಚೋ ಕೆಲಸ ಮಾಡಿದ್ದಾರೆ. ಈ ಹಿಂದಿನ ಆದೇಶದಲ್ಲಿ ಖಾಸಗಿ ಶಾಲೆಗಳಿಗೆ ಕಡ್ಡಾಯವಲ್ಲ ಎಂಬದು ಸ್ಪಷ್ಟವಾಗಿ ಮುದ್ರಣವಾಗಿ ಇಲಾಖೆಯ ಅಧಿಕಾರಿಗಳ ಸಹಿಯೋ ಆಗಿತ್ತು. ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಈಗ ಆದೇಶ ಪ್ರತಿಯನ್ನು ಬದಲಾಯಿಸುವುದಾಗಿ ಸಚಿವರು ತಿಳಿಸಿದ್ದಾರೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶದಲ್ಲಿ ತಿಳಿಸಲಾಗಿತ್ತು.