ನ್ಯೂಸ್ ನಾಟೌಟ್: ಜೋಕಾಲಿ ಆಡುತ್ತಿದ್ದ ಬಾಲಕನೊಬ್ಬ ಜೋಕಾಲಿಯ ಹಗ್ಗ ಸಿಲುಕಿ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ.
ಪಿ.ಜೆ ಕೊಟ್ರೇಶ್ (14) ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದನು. ಈತ ಶಾಲೆ ಮುಗಿಸಿ ಬಂದು ಮನೆಯಲ್ಲಿ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದ ವೇಳೆ ಜೋಕಾಲಿಯ ಹಗ್ಗವು ಆಕಸ್ಮಿಕವಾಗಿ ಕೊರಳಿಗೆ ಸುತ್ತಿಕೊಂಡಿದೆ.
ಪರಣಾಮ ಹಗ್ಗ ಬಿಗಿಯಾಗಿ ಬಾಲಕನಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.