ನ್ಯೂಸ್ ನಾಟೌಟ್: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಆದಿತ್ಯ ಎಲ್-1 ಉಡಾವಣೆಯ ದಿನವೇ ಅಧ್ಯಕ್ಷ ಎಸ್.ಸೋಮನಾಥ್ ಗೆ ಕ್ಯಾನ್ಸರ್ ದೃಢಪಟ್ಟಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ.
ಈ ವಿಷಯವನ್ನು ಸ್ವತಃ ಸೋಮನಾಥ್ ಮಾಧ್ಯಮವೊಂದರ ಜತೆಗೆ ಮಾತನಾಡುವಾಗ ಹಂಚಿಕೊಂಡಿದ್ದರು ಎನ್ನಲಾಗಿದೆ. “ಚಂದ್ರಯಾನ-3 ಯೋಜನೆ ವೇಳೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿತ್ತು. ಆರೋಗ್ಯ ತಪಾಸಣೆ ಹೊಟ್ಟೆಯಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಈ ವಿಷಯ ಆದಿತ್ಯ ಎಲ್-1 ಉಡಾವಣೆ ದಿನವೇ ಗೊತ್ತಾಯಿತು’ ಎಂದರು.
ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಯೋಜನೆಯಡಿ ಮೊತ್ತಮೊದಲ ಬಾಹ್ಯಾಕಾಶ ನಿಲ್ದಾಣ ನಿರ್ಮಾಣಕ್ಕೆ ಆದಷ್ಟು ಬೇಗ ಇಸ್ರೋ ಅಡಿ ಇಡಲಿದೆ. ಮುಂದಿನ ಕೆಲವು ವರ್ಷಗಳಲ್ಲಿ ಬಾಹ್ಯಾಕಾಶ ನಿಲ್ದಾಣದ ಮೊದಲ ಮಾದರಿಯನ್ನು ಅನಾವರಣ ಗೊಳಿಸುವುದಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದಾರೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಇಸ್ರೋಗೆ ಗುರಿ ನಿಗದಿಪಡಿಸಿದ್ದು 2035ನೇ ಇಸ್ವಿ ಒಳಗೆ ಅಂತರಿಕ್ಷ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ಬಾಹ್ಯಾಕಾಶ ನಿಲ್ದಾಣ ನಿರ್ಮಾಣ ಸಂಬಂಧ ಇಸ್ರೋ ತಂತ್ರಜ್ಞಾನ ಅಭಿವೃದ್ಧಿಪಡಿಸಲು ಈಗಾಗಲೇ ಆರಂಭಿಸಿದೆ. ಕೆಳ ಭೂ ಪಥದಲ್ಲಿ ಭಾರತೀಯ ಅಂತರಿಕ್ಷ ನಿಲ್ದಾಣ ನಿಯೋಜಿಸಲಾಗುತ್ತಿದ್ದು ಇಬ್ಬರು ಅಥವಾ ನಾಲ್ವರು ಗಗನಯಾನಿಗಳು ಉಳಿದುಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.
Follow us for more updates:
FB PAGE : https://www.facebook.com/NewsNotOut2023
Insta : https://www.instagram.com/newsnotout/
Tweet : https://twitter.com/News_Not_Out
YouTube : https://www.youtube.com/@newsnotout8209
Koo app: https://www.kooapp.com/profile/NewsNotOut
Website : https://newsnotout.com/