ನ್ಯೂಸ್ ನಾಟೌಟ್ :ಸುಳ್ಯದ ಐರ್ವನಾಡು ಎಂಬಲ್ಲಿ ಕಳ್ಳರು 5 ಗೋಣಿ ಚೀಲ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಡಿಕೆಯನ್ನು ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಲಾಗಿತ್ತು. ಮಾ.14 ರಂದು ಈ ಘಟನೆ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಕಳವು ಮಾಡಿದ ಸುಳ್ಯದ ಮಂಡೆಕೋಲಿನ ಕೊಡೆಂಚಿಕಾರಿನ ಸುಪ್ರೀತ್ ಕೆ (20) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಒಟ್ಟು 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾ ವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.