ನ್ಯೂಸ್ ನಾಟೌಟ್: ಕ್ರಿಕೆಟಿಗ ಕೆ.ಎಲ್. ರಾಹುಲ್ – ನಟಿ ಆಥಿಯಾ ಶೆಟ್ಟಿ ಶೀಘ್ರದಲ್ಲೇ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆ.ಎಲ್ .ರಾಹುಲ್ ಅವರ ಮಾವ ಬಾಲಿವುಡ್ ನಟ ಸುನೀಲ್ ಶೆಟ್ಟಿ ಸುಳಿವೊಂದನ್ನು ನೀಡಿದ್ದಾರೆ.
ನಟ ಸುನೀಲ್ ಶೆಟ್ಟಿ ಈಗ ಮಾಧುರಿ ದೀಕ್ಷಿತ್ ಜತೆಗೆ ಜನಪ್ರಿಯ ಡ್ಯಾನ್ಸ್ ರಿಯಾಲಿಟಿ ಶೋ ʻಡ್ಯಾನ್ಸ್ ದೀವಾನೆʼಯಲ್ಲಿ ತೀರ್ಪುಗಾರರಲ್ಲಿ ಒಬ್ಬರಾಗಿದ್ದಾರೆ. ವಿಶೇಷ ಸಂಚಿಕೆಯಲ್ಲಿ, ಕಾರ್ಯಕ್ರಮದ ನಿರೂಪಕಿ ಭಾರ್ತಿ ಸಿಂಗ್ ಅವರು ಸುನೀಲ್ ಅವರು ಅಜ್ಜನ ರೀತಿ ಹೇಗೆ ವರ್ತಿಸಬಹುದು ಎಂದು ಹಾಸ್ಯಮಯವಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುನೀಲ್ “ಹೌದು ಮುಂದಿನ ಸೀಸನ್ ಗೆ ಬಂದಾಗ ನಾನು ವೇದಿಕೆಯ ಮೇಲೆ ಅಜ್ಜನಂತೆಯೇ ಓಡಾಡುತ್ತೇನೆʼʼ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ” ನಟನ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಅಥಿಯಾ ಶೆಟ್ಟಿ ಮದುವೆ ನಂತರ ಸಿನಿಮಾಗಳಿಂದ ದೂರವಿದ್ದಾರೆ. ಇತ್ತೀಚೆಗೆ ಯಾವುದೇ ಬಾಲಿವುಡ್ಗೆ ಸಂಬಂಧಿಸಿದ ಪಾರ್ಟಿಗಳಲ್ಲಿ ಅಥಿಯಾ ಕಾಣಿಸಿಕೊಳ್ಳುತ್ತಿಲ್ಲ. ಹಾಗಾಗಿ ಈ ಸುದ್ದಿ ಸತ್ಯ ಇರಬಹುದು ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.