ನ್ಯೂಸ್ ನಾಟೌಟ್ : ಮಹಾಶಿವರಾತ್ರಿಯ ದಿನದಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಹಿರಿಯ ಆನೆ ಲತಾ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ ಎಂದು ತಿಳಿದು ಬಂದಿದೆ. ಲತಾಗೆ 60 ವರ್ಷ ವಯಸ್ಸಾಗಿತ್ತು ಎನ್ನಲಾಗಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆ ಈ ಘಟನೆ ಸಂಭವಿಸಿದೆ.
ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿದ್ದ ಲತಾ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಧರ್ಮಸ್ಥಳದಲ್ಲಿ ಪ್ರಸ್ತುತ ಲಕ್ಷ್ಮೀ ಹಾಗೂ ಶಿವಾನಿ ಆನೆಗಳಿದ್ದು, ಲತಾ ಸಾವಿನಿಂದ ಲಕ್ಷ್ಮೀ ಹಾಗೂ ಶಿವಾನಿ ಆನೆಗಳು ಮಂಕಾಗಿವೆ. ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.