ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 16, 2024 (ಶನಿವಾರ)ರಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಲೋಕಸಭಾ ಚುನಾವಣೆಯು 7 ಹಂತದಲ್ಲಿ ನಡೆಯಲಿದೆ.
ಎಪ್ರಿಲ್ 26 ಕ್ಕೆ ಕರ್ನಾಟಕದಲ್ಲಿ ಮತದಾನ, ಮೇ 7ಕ್ಕೆ 2 ನೇ ಹಂತದ ಮತದಾನ ನಡೆಯಲಿದೆ.
ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಎಪ್ರಿಲ್ 19, 2024 ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಎಪ್ರಿಲ್ 26, 2024 ರಂದು, 3ನೇ ಹಂತದ ಮತದಾನ ಮೇ.7 ನಡೆಯಲಿದೆ. 4ನೇ ಹಂತದ ಮತದಾನ ಮೇ.13 ನಡೆಯಲಿದೆ.5ನೇ ಹಂತದ ಮತದಾನ ಮೇ.20 ನಡೆಯಲಿದೆ.6ನೇ ಹಂತದ ಮತದಾನ ಮೇ.25 ನಡೆಯಲಿದೆ.7ನೇ ಹಂತದ ಮತದಾನ ಜೂನ್ 1 ನಡೆಯಲಿದೆ.ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಬರಲಿದೆ.
ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಉತ್ತರಕರ್ನಾಟಕ ಮೂರನೇ ಹಂತದಲ್ಲಿಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಹಂತ | ಲೋಕಸಭಾ ಕ್ಷೇತ್ರಗಳು | ಮತದಾನ | ಫಲಿತಾಂಶ |
ಹಂತ 1 | ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್ಸಿ) | ಏಪ್ರಿಲ್ 26 | ಜೂನ್ 04 |
ಹಂತ 2 | ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್ಸಿ), ಗುಲ್ಬರ್ಗಾ (ಎಸ್ಸಿ), ರಾಯಚೂರು (ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ | ಮೇ 07 | ಜೂನ್ 04 |