ನ್ಯೂಸ್ ನಾಟೌಟ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲ್ಲುಗುಂಡಿ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ಕಾರ್ಯ ತೀವ್ರಗೊಂಡಿದೆ. ತಾಲ್ಲೂಕಿನ ಗಡಿ ಪ್ರವೇಶಿಸುವ ಹಾಗೂ ಹೊರ ಹೋಗುವ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.
ಏ.26ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಗಡಿಯಲ್ಲಿ ವಾಹನಗಳ ತಪಾಸಣಾ ಕೇಂದ್ರದಲ್ಲಿ ನಿಯೋಜಿಸಿರುವ ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ.ಹೀಗಾಗಿ ವಾಹನ ತಪಾಸಣಾ ಕಾರ್ಯ ಬಿರುಸಾಗಿದ್ದು,ಮಡಿಕೇರಿ ಭಾಗದಿಂದ ,ದ. ಕ ಭಾಗಕ್ಕೆ ಬರುವ ವಾಹನಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.