ನ್ಯೂಸ್ ನಾಟೌಟ್ : ಇಡೀ ರಾಜ್ಯಾದ್ಯಂತ ಸುದ್ದಿಯಾದ ದಕ್ಷಿಣ ಕನ್ನಡ ಹಾಗೂ ಕೊಡಗು ಗಡಿ ಪ್ರದೇಶದ ಕೂಜಿಮಲೆ ಎಸ್ಟೇಟ್ ಪ್ರದೇಶಕ್ಕೆ ನಕ್ಸಲರು ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಕಾರ್ಕಳದಿಂದ ಆಗಮಿಸಿರುವ ನಕ್ಸಲ್ ನಿಗ್ರಹ ದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಬಿಸ್ಲೆ, ಕಡಮಕಲ್ಲು, ಸಂಪಾಜೆ, ಕರಿಕೆ, ಕೂಜಿಮಲೆ, ಗುಂಡ್ಯ, ಶಿಶಿಲ ಭಾಗದಲ್ಲಿ ಶೋಧ ನಡೆಸಲಾಗಿದೆ. ಹೆಚ್ಚುವರಿ ಎರಡು ತಂಡ ಆಗಮಿಸಿ ಶೋಧ ಕಾರ್ಯದಲ್ಲಿ ತೊಡಗಿಕೊಂಡಿವೆ.ನಕ್ಸಲ್ ನಿಗ್ರಹ ದಳದ ಎಸ್.ಪಿ. ಜಿತೇಂದ್ರ ಕುಮಾರ್ ದಯಾಮ ಅವರು ಮಡಿಕೇರಿಯಲ್ಲೇ ಇದ್ದುಕೊಂಡು ಶೋಧ ಕಾರ್ಯ, ತನಿಖೆಯ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.