ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಎನ್ಎಫ್ ತಂಡ ಕಾರ್ಕಳದಿಂದ ಆಗಮಿಸಿದ್ದು,ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ.ಕೂಜಿಮಲೆಯಿಂದ ಎಎನ್ಎಫ್ ತಂಡ ಕೂಂಬಿಂಗ್ ಆರಂಭಿಸಿದ್ದಾರೆ.ಶನಿವಾರ ಸಂಜೆ ಕೂಜಿಮಲೆಯ ಅಂಗಡಿಯೊಂದರಿಂದ ಎಂಟು ಮಂದಿಯ ತಂಡ ಭೇಟಿ ನೀಡಿ ೪೦೦೦ ರೂ. ನಗದು ನೀಡಿ ಸಾಮಗ್ರಿ ಪಡೆದುಕೊಂಡಿದ್ದಾರೆಂದು ವರದಿಯಾಗಿತ್ತು. ನಕ್ಸಲರೆಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು, ಎಎನ್ಎಫ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಂಕಿತ ನಕ್ಸಲರ ತಂಡದಲ್ಲಿ ಆರು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದರು ಎನ್ನಲಾಗಿದ್ದು, ಸಶಸ್ತ್ರಧಾರಿಗಳಾಗಿದ್ದರು ಎನ್ನುವ ಮಾಹಿತಿಯಿದೆ.