ಮೋದಿ ಹಿಂದೂ ಅಲ್ಲ ಎಂದದ್ದೇಕೆ ಲಾಲೂ ಪ್ರಸಾದ್ ಯಾದವ್.? ಲಾಲೂ ಕೊಟ್ಟ ಕಾರಣಕ್ಕೆ ಎಲ್ಲೆಡೆ ಆಕ್ರೋಶ..!

ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಹಿಂದೂ ಅಲ್ಲ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹೇಳಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ತಾಯಿ ಹೀರಾಬೆನ್ ನಿಧನರಾದಾಗ ಪ್ರಧಾನಿ ಮೋದಿ ಕೇಶ ಮುಂಡನ ಮಾಡಿಸಿಲ್ಲ. ಹೀಗಾಗಿ ಮೋದಿ ಹಿಂದೂ ಅಲ್ಲ ಎಂದು ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ. ಮೋದಿ ಟೀಕಿಸಲು ಹೋದ ಲಾಲೂ ಪ್ರಸಾದ್ ಯಾದವ್, ಮೋದಿ ತಾಯಿ ನಿಧನವನ್ನು ರಾಜಕೀಯ ಎಳೆದು ತಂದು ವಿವಾದ ಎಬ್ಬಿಸಿದ್ದಾರೆ. ಇಂಡಿಯಾ ಮೈತ್ರಿ ಕೂಟ ಪಕ್ಷಗಳು ಪಾಟ್ನಾದ ಗಾಂಧಿ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಲಾಲು ಪ್ರಸಾದ್ ಯಾದವ್, ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಮೋದಿ ಹಿಂದೂ ಆಗಿದ್ದರೆ, ಅವರ ತಾಯಿ ನಿಧನರಾದಾಗ ಕೇಶ ಮುಂಡನ ಮಾಡಿಸಿಲ್ಲ ಯಾಕೆ? ಎಂದು ಲಾಲು ಪ್ರಸಾದ್ ಯಾದವ್ ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಪರಿವಾರವಾದ, ಕುಟುಂಬ ರಾಜಕಾರಣವನ್ನು ಟೀಕಿಸುತ್ತಿದ್ದಾರೆ. ಮೋದಿಗೆ ಕುಟುಂಬವಿಲ್ಲ ಎಂದು ಹೀಗೆ ಮಾಡುತ್ತಿದ್ದಾರೆ. ಮೋದಿಗೆ ಯಾಕೆ ಮಕ್ಕಳಿಲ್ಲ, ಮೋದಿ ಹಿಂದೂವೇ ಅಲ್ಲ ಎಂದು ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ. ಲಾಲೂ ಪ್ರಸಾದ್ ಯಾದವ್ ಹೇಳಿಕೆಗೆ ಪರ ವಿರೋಧಗಳು ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳು ವ್ಯಕ್ತವಾಗಿದೆ. ಮೈತ್ರಿ ಮುರಿದು ಬೆಜೆಪಿ ಜೊತೆ ಸೇರಿ ನಿತೀಶ್ ಕುಮಾರ್ ಸರ್ಕಾರ ರಚಿಸಿದ ಬಳಿಕ ಆರ್‌ಜೆಡಿ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ತಮ್ಮ ಮೈತ್ರಿ ಸರ್ಕಾರ ಪತನದ ಬಳಿಕ ತಮ್ಮ ಪಕ್ಷದ ಬಲವನ್ನು ಹೆಚ್ಚಿಸಲು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಬಿಹಾರದಾದ್ಯಂತ ‘ಜನ ವಿಶ್ವಾಸ ಯಾತ್ರೆ’ಯನ್ನು ಕೈಗೊಂಡಿದ್ದಾರೆ.