ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಚುನಾವಣಾ ಕಣದಲ್ಲಿ ಈಗ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಒಂದು ಕಡೆ ಬಿಜೆಪಿ ಗೆಲುವು ನಮ್ಮದೇ ಅಂತ ಬೀಗುತ್ತಿದ್ದರೆ ಮತ್ತೊಂದು ಕಡೆ ಕಾಂಗ್ರೆಸ್ ನಾವು ಅಷ್ಟು ಸುಲಭದಲ್ಲಿ ನಿಮಗೆ ಬಿಟ್ಟುಕೊಡುವುದಿಲ್ಲ ಎಂದು ಟೊಂಕಕಟ್ಟಿ ನಿಂತಿದೆ. ಮಾತ್ರವಲ್ಲ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಮಂಗಳೂರಿನಲ್ಲಿ ಉದ್ಘಾಟನೆಗೊಂಡಿತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರೂ ತನ್ನ ಶಿಷ್ಯ ಪದ್ಮರಾಜ್ ಗೆ ಗೆಲುವು ಸಿಗಲಿ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಮನತುಂಬಿ ಹಾರೈಸಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ದ.ಕ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ತಾರೆ ಪ್ರತಿಭಾ ಕುಳಾಯಿ, ಮಾಜಿ ಸಚಿವ ಅಭಯ ಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಸುಳ್ಯದ ಕಾಂಗ್ರೆಸ್ ನಾಯಕರು ಕೂಡ ಭಾಗಿಯಾಗಿದ್ದು ವಿಶೇಷವಾಗಿತ್ತು. ಜಿ.ಕೆ. ಹಮೀದ್ ಗೂನಡ್ಕ, ನಂದರಾಜ್ ಸಂಕೇಶ, ರಾಧಾಕೃಷ್ಣ ಬೊಳ್ಳೂರು, ಜಯಪ್ರಕಾಶ್ ರೈ ಸೇರಿದಂತೆ ಹಲವಾರು ನಾಯಕರು ಹಾಜರಿದ್ದರು.