ನ್ಯೂಸ್ ನಾಟೌಟ್: ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣವು ಮಂಗಳೂರಿನ ಉರ್ವಾ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿತ್ತು.
ಇದರ ಆರೋಪಿ ಮಹೇಶ್ ಪೈ ಎಂಬಾತನಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ತೀರ್ಪು ನೀಡಿದೆ ಎಂದು ವರದಿ ತಿಳಿಸಿದೆ. 2023 ಜೂನ್ 18ರಂದು ಉರ್ವಾ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಿಂದ ವಿದ್ಯಾರ್ಥಿನಿಯರ 3 ಮೊಬೈಲ್ ಫೋನ್ ಕಳವಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಆರೋಪಿ ಮಹೇಶ್ ಪೈಯನ್ನು ಉರ್ವ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ನ್ಯಾಯಾಲಯವು ಆರೋಪಿ ವಿರುದ್ಧದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮೂರು ವರ್ಷ ಜೈಲು ಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ.