ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿದೆ.ಅದರಲ್ಲೂ ಕೆಲವೊಂದು ಕಾಯಿಲೆಗಳು ವೈದ್ಯ ಲೋಕಕ್ಕೆ ಸವಾಲಾಗಿ ಪರಿಣಮಿಸುತ್ತಿವೆ.ಇದೀಗ 19 ವರ್ಷ ವಯಸ್ಸಿನ ಯುವತಿಯ ಹೊಟ್ಟೆಯಲ್ಲಿ ಬರೋಬ್ಬರಿ 7.5 ಕೆಜಿ ಗಡ್ಡೆಯಿದ್ದು, (tumor in stomach) ಅದನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಕ್ಯಾನ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ (Medical power).
ಬೆಂಗಳೂರು ನಗರದ ಯುವತಿಯ ಹೊಟ್ಟೆಯ ಸುತ್ತ ಕಳೆದ ಒಂದೂವರೆ ವರ್ಷಗಳಿಂದ ನಿರಂತರವಾಗಿ ಹೆಚ್ಚಳ ಕಂಡು ಬಂದಿತ್ತು. ಇದರಿಂದಾಗಿ ಯುವತಿಯ ಪೋಷಕರು ಆತಂಕಕ್ಕೆ ಒಳಗಾಗಿ ವಿದ್ಯಾರಣ್ಯಪುರ ಸಮೀಪವಿರುವ ಕ್ಯಾನ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದಿದ್ದರು.ಬಳಿಕ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರಾದ ಡಾ. ಚೈತ್ರಾ ಎಸ್.ನಿರಂತರ (Dr Chaitra S Nirantara) ಅವರು ತಪಾಸಣೆ ನಡೆಸಿ ಪರೀಕ್ಷೆಗೊಳಪಡಿಸಿದಾಗ ಗರ್ಭಕೋಶದಲ್ಲಿ 7.5 ಕೆಜಿಯಷ್ಟು ಗಡ್ಡೆ ಇರುವುದು ಪತ್ತೆಯಾಗಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಹೊರತೆಗೆಯುವಲ್ಲಿ ಡಾ. ಚೈತ್ರಾ ಎಸ್. ನಿರಂತರ, ಡಾ ನಂದ ಕುಮಾರ್ ಮತ್ತು ತಂಡ ಯಶಸ್ವಿಯಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ಯುವತಿ ಆರೋಗ್ಯವಾಗಿದ್ದು ಪೋಷಕರ ಆತಂಕ ದೂರವಾಗಿದೆ.
19 ವರ್ಷದ ಯುವತಿಯಲ್ಲಿ 7.5 ಕೆಜಿ ತೂಕದ ಗಡ್ಡೆ ಇರುವುದು ತುಂಬಾ ವಿರಳ. ಶಸ್ತ್ರಚಿಕಿತ್ಸೆ ಮಾಡುವುದು ಸ್ವಲ್ಪ ಸವಾಲಿನ ಕೆಲಸವೇ, ಆದರೂ ನಮ್ಮ ವೈದ್ಯಕೀಯ ತಂಡದ ನೆರವಿನಿಂದ ಗಡ್ಡೆಯನ್ನು ಹೊರೆತೆಗೆಯುವಲ್ಲಿ ಯಶಸ್ವಿಯಾಗಿದ್ದೇವೆ. ಯುವತಿ ಆರೋಗ್ಯವಾಗಿದ್ದಾರೆ ಎಂದು ಶಸ್ತ್ರಕ್ರಿಯೆ ನಡೆಸಿದ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಚೈತ್ರಾ ಎಸ್. ನಿರಂತರ ತಿಳಿಸಿದ್ದಾರೆ.