ನ್ಯೂಸ್ ನಾಟೌಟ್: ನಮಾಜ್ ಮಾಡುವ ಸಮಯದಲ್ಲಿ ಹನುಮಾನ್ ಚಾಲೀಸವನ್ನು ಮೊಬೈಲ್ ನಲ್ಲಿ ಹಾಕಿದಕ್ಕೆ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮುಖೇಶ್ ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಐವರು ಮುಸ್ಲಿಂ ಯುವಕ ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರತ್ಪೇಟೆಯಲ್ಲಿ ಮುಖೇಶ್ ಮೊಬೈಲ್ ಸರ್ವೀಸ್ ಅಂಗಡಿ ಹೊಂದಿದ್ದಾನೆ. ಭಾನುವಾರ(ಮಾ.೧೭) ಸಂಜೆ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದು, ಜೋರು ಶಬ್ಧ ಕೊಟ್ಟಿದ್ದ ಎಂದು ಹೇಳಲಾಗಿದೆ.
ಅದೇ ವೇಳೆ ಅನ್ಯಕೋವಿನ ಯುವಕರು ನಮಾಜ್ ಮಾಡುತ್ತಿದ್ದರು ಎನ್ನಲಾಗಿದೆ. ನಮಾಜ್ ಮಾಡುವಾಗ ಜೋರು ಶಬ್ಧ ಕೇಳಿದ್ದರಿಂದ ಆಕ್ರೋಶಗೊಂಡ ಐವರು ಯುವಕರು, ಮುಖೇಶ್ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಆತನನ್ನು ಅಂಗಡಿಯಿಂದ ಹೊರ ಎಳೆದು ಮನಸೋ ಇಚ್ಚೆ ಥಳಿಸಿದ್ದಾರೆ ಎನ್ನಲಾಗಿದೆ. ಅದರಿಂದ ಮುಖೇಶ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ 5 ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.