ನ್ಯೂಸ್ ನಾಟೌಟ್ : ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 4 ರಂದು ಬೆಳಗ್ಗೆ ನಡೆದ ಬೆನ್ನಲ್ಲೇ ಅಬಿನ್ ಅನ್ನುವ 23 ವರ್ಷದ ಯುವಕನನ್ನು ಬಂಧಿಸಲಾಗಿದೆ.
ಕೇರಳ ಮೂಲದ ಅಭಿನ್ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರು ಕೂಡ ಕಡಬ ಮೂಲದವರು ಎಂದು ತಿಳಿದು ಬಂದಿದೆ. ಓರ್ವ ಹುಡುಗಿಯ ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ. ಇನ್ನಿಬ್ಬರು ಹುಡುಗಿಯರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಅಬಿದ್ ಯಾವ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ ಅನ್ನುವುದು ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.