ನ್ಯೂಸ್ ನಾಟೌಟ್: ಶೋಕಿಗಾಗಿ ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುವ ಮೂಲಕ ಸಮಾಜದಲ್ಲಿ ಅಶಾಂತಿ ಹಾಗೂ ಭಯದ ವಾತಾವರಣ ಸೃಷ್ಠಿಸಿದ ಇಬ್ಬರ ಯುವಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದಿದ್ದ ಇಬ್ಬರು ಯುವಕರ ಮೇಲೆ ಜಿಲ್ಲೆಯ ಸೇಡಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿಯ ಸೇಡಂ ಪಟ್ಟಣದ ಇಂದಿರಾನಗರದ ನಿವಾಸಿಗಳಾದ ಮಹೇಶ ಹಾಗೂ ಬಸವರಾಜ ಎಂಬುವ ಯುವಕರೇ ನಕಲಿ ಲೈಟರ್ ಮಾದರಿ ಪಿಸ್ತೂಲ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಟ್ಟ ಯುವಕರು ಎಂದು ಗುರುತಿಸಲಾಗಿದೆ.
ಇದೇ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರು ಯುವಕರನ್ನು ಕರೆಯಿಸಿ ವಿಚಾರಣೆ ನಡೆಸಿದ್ದು, ಅವರಿಂದ ನಕಲಿ ಲೈಟರ್ ಮಾದರಿ ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರಗಳನ್ನು ಹರಿಬಿಡುವ ಮೂಲಕ ಅಶಾಂತಿ ಸೃಷ್ಠಿಸದಂತೆ ಎಚ್ಚರಿಸಿದ್ದಾರೆ. ಪೊಲೀಸರು ಬಿಸಿ ಮುಟ್ಟಿಸಿದ ನಂತರ ಯುವಕರು, ಇನ್ನು ಈ ರೀತಿಯಲ್ಲಿ ನಕಲಿ ಪಿಸ್ತೂಲ್ ಮಾರಕಾಸ್ತ್ರಗಳನ್ನು ಹಿಡಿದ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಸೃಷ್ಟಿಸುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.