ನ್ಯೂಸ್ ನಾಟೌಟ್: ಸಂಸದ ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಮಾತನಾಡಿ, ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆಂದು ಬಿಜೆಪಿಯವರು ಅಭ್ಯರ್ಥಿ ಬದಲಾವಣೆ ಮಾಡುತ್ತಿರಬಹುದು ನನಗೆ ಗೊತ್ತಿಲ್ಲ.
ಯದುವೀರ್ ಆಗುವುದು,ಮಾಧ್ಯಮವರು ಸೃಷ್ಟಿ ಮಾಡಿಕೊಂಡು ಹೊಂದಾಣಿಕೆ ರಾಜಕೀಯ ಎಂದರೆ ಹೇಗೆ ಎಂದು ಕಿಡಿಕಾರಿದ್ದಾರೆ. ತಾನು ಎಂಪಿಯಾದರೆ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ನೀಡಿ, ಎರಡು ಸಾರಿ ಎಂಪಿ ಆಗಿದ್ದಾರಲ್ಲ ನನ್ನ ಕುರ್ಚಿ ಅಲುಗಾಡಲೇ ಇಲ್ಲಾ, ಕ್ಯಾಂಡಿಡೇಟ್ ಯಾರದಾರೂ ಆಗಲಿ ನಾವು ಈ ಬಾರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು.
ಸಂಸದ ಅನಂತ ಕುಮಾರ್ ಹೆಗಡೆ (Anant Kumar Hegde) ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಅನಂತಕುಮಾರ್ ಹೆಗ್ಡೆ ಆರ್ಡಿನರಿ ವ್ಯಕ್ತಿ ಅಲ್ಲ, 5 ಸಲ ಸಂಸದರಾಗಿದ್ದವರು, ಸಚಿವರಾಗಿದ್ದವರು. ಸಂವಿಧಾನ ಬದಲಿನ ವಿಚಾರ ಹೇಳಬೇಕಾದರೆ ಪಕ್ಷದ ತೀರ್ಮಾನ ಆಗಿರದೇ ಹೇಳಲು ಆಗತ್ತಾ?, ಅವರ ವಿರುದ್ಧ ಏನಾದರೂ ಕ್ರಮ ತೆಗೆದುಕೊಂಡರಾ ಎಂದು ಪ್ರಶ್ನೆ ಮಾಡಿದರು. ಮನುಸ್ಮೃತಿ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಅದಾಗಿದ್ದು, ಮನುವಾದದಲ್ಲಿ ನಂಬಿಕೆ ಇಟ್ಟವರು, ಸಂವಿಧಾನ ಜಾರಿಯಾದ ದಿನದಿಂದಲೂ ಅವರು ಸಂವಿಧಾನ ವಿರೋಧ ಮಾಡಿಕೊಂಡೇ ಬಂದಿದ್ದಾರೆ, ಈಗ ಅನಂತ ಕುಮಾರ್ ಹೆಗಡೆ ಮೂಲಕ ಹೇಳಿಸುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.