ನ್ಯೂಸ್ ನಾಟೌಟ್: ದ್ವಿತೀಯ ಪಿಯುಸಿ ಕನ್ನಡ ಮತ್ತು ಅರೆಬಿಕ್ ಭಾಷಾ ವಿಷಯಗಳ ಪರೀಕ್ಷೆ ಶುಕ್ರವಾರ ಮಾರ್ಚ್ 1 ರಂದು ನಡೆದಿದೆ. ಈ ವೇಳೆ ಅಧಿಕಾರಿಗಳು ವಿದ್ಯಾರ್ಥಿಗಳ ಗೈರು ಹಾಜರಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಜ್ಯಾದ್ಯಂತ ಪರೀಕ್ಷೆಗೆ ಒಟ್ಟು 5.25 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ 5.07 ಲಕ್ಷ ಮಂದಿ ಪರೀಕ್ಷೆ ಬರೆದಿದ್ದಾರೆ. ಶೇ.96.53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು ಎನ್ನಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಶೇ.99.53 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡದಲ್ಲಿ ಶೇ.98.85, ಕೊಡಗು, ಬಾಗಲಕೋಟೆಯಲ್ಲಿ ತಲಾ ಶೇ.98.02, ಬೆಂಗಳೂರು ಗ್ರಾಮೀಣದಲ್ಲಿ ಶೇ.97.47, ಬೆಂಗಳೂರು ಉತ್ತರದಲ್ಲಿ ಶೇ.97.25 ಮತ್ತು ಬೆಂಗಳೂರು ದಕ್ಷಿಣದಲ್ಲಿ ಶೇ.96.07 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು.
ಬೀದರ್ನಲ್ಲಿ ಶೇ.91.64 ಮಕ್ಕಳು ಮಾತ್ರ ಪರೀಕ್ಷೆ ಬರೆದರು. ಅಂದರೆ ದಕ್ಷಿಣ ಕನ್ನಡದಲ್ಲಿ ಸುಮಾರು 209 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದಾರೆ. ರಾಜ್ಯಾದ್ಯಂತ 1,124 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದ್ದು, 540 ಜಿಲ್ಲಾ ಜಾಗೃತ ದಳ ಮತ್ತು 3,108 ವಿಶೇಷ ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.