ನ್ಯೂಸ್ ನಾಟೌಟ್: ಬಾಲಿವುಡ್ ನಟಿಯರನ್ನು ಡೀಪ್ಫೇಕ್ ತಂತ್ರಜ್ಞಾನದ ದುರ್ಬಳಕೆ ಮಾಡುವವರು ಮತ್ತೆ ಮತ್ತೆ ಕಾಡುತ್ತಿದ್ದಾರೆ. ಇತ್ತೀಚೆಗೆ ಈ ವಿಷಯವಾಗಿ ಭಾರಿ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ವಿಷಯದಲ್ಲಿ ಆರೋಪಿಯನ್ನು ಸೆರೆಹಿಡಿಯಲಾಗಿತ್ತು. ಡೀಪ್ಫೇಕ್ಗೆ ಈಗಾಗಲೇ ಅನೇಕ ನಟಿಯರು ಬಲಿಯಾಗಿದ್ದು ಹಲವರು ಹೇಳಿಕೊಳ್ಳದೆ ಸುಮ್ಮನಿದ್ದಾರೆ ಎನ್ನಲಾಗಿದೆ.
ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್ಫೇಕ್ ವಿಡಿಯೋ ವೈರಲ್ ಆಗಿದೆ. ಯಾರದೋ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್ ಮಾಡಿರುವ ಕಿಡಿಗೇಡಿಗಳು ವಿಡಿಯೋ ವೈರಲ್ ಮಾಡಿದ್ದಾರೆ. ರಶ್ಮಿಕಾ ಹೊಸ ಡೀಪ್ಫೇಕ್ ವಿಡಿಯೋದಲ್ಲಿ ಯುವತಿಯೊಬ್ಬರು ಡ್ಯಾನ್ಸ್ ಮಾಡುತ್ತಿದ್ದಾರೆ. ಯಾರೋದು ಯುವತಿಯ ದೇಹಕ್ಕೆ ರಶ್ಮಿಕಾ ಮುಖ ಎಡಿಟ್ ಮಾಡಲಾಗದೆ. ಈ ವಿಡಿಯೋ ವೈರಲ್ ಆಗ್ತಿದ್ದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಡೀಪ್ಫೇಕ್ ವಿಡಿಯೋ ಮಾಡಬೇಡಿ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ.