ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರು ಕಳೆದ ೨೦ ದಿನಗಳಿಂದ ನಿರಂತರವಾಗಿ ತಮ್ಮ ಜಮೀನಿನಿಂದ ಮಣ್ಣು ತೆಗೆದು ಸಾಗಾಟ ನಡೆಸುತ್ತಿರುವ ಪ್ರಕ್ರಿಯೆ ನಡೆಸುತ್ತಿರುವುದರಿಂದ ಕೈಪಡ್ಕ ರಸ್ತೆ ಸಂಪೂರ್ಣ ಧೂಳಿನಿಂದ ತುಂಬಿ ತುಳುಕುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನ್ಯೂಸ್ ನಾಟೌಟ್ ಜೊತೆಗೆ ಮಾತನಾಡಿದ ಸ್ಥಳೀಯರೊಬ್ಬರು, ‘ಕಳೆದ ಕೆಲವು ದಿನಗಳಿಂದ ವ್ಯಕ್ತಿಯೊಬ್ಬರು ತಮ್ಮ ಜಮೀನಿನಲ್ಲಿ ನಿರಂತರವಾಗಿ ಮಣ್ಣನ್ನು ತೆಗೆದು ಬೇರೆ ಕಡೆಗೆ ವರ್ಗಾಯಿಸುತ್ತಿದ್ದಾರೆ. ಅವರ ಜಮೀನು ಅವರ ಇಷ್ಟ, ಅವರೇನು ಬೇಕಾದರೂ ಮಾಡಿಕೊಳ್ಳಲಿ, ಆದರೆ ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಟಿಪ್ಪರ್ ಲಾರಿಯಲ್ಲಿ ನಿರಂತರವಾಗಿ ಮಣ್ಣು ಸಾಗಾಟ ಮಾಡುವುದರಿಂದ ರಸ್ತೆ ಹಾಳಾಗುತ್ತಿದೆ. ರಸ್ತೆ ತುಂಬೆಲ್ಲ ಧೂಳು ತುಂಬಿಕೊಂಡಿದೆ. ಇದರಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.