ನ್ಯೂಸ್ ನಾಟೌಟ್ : ಯುವಕನೋರ್ವ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದಿಂದ ವರದಿಯಾಗಿದೆ. ಚರಣ್ ಕುಞೇಟಿ(28 ವರ್ಷ) ಮೃತ ಯುವಕನೆಂದು ತಿಳಿದು ಬಂದಿದೆ.
ಯುವಕ ಕಳೆದ ಕೆಲ ತಿಂಗಳಿಂದ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ ಫೆ.28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಮೃತರು ತಂದೆ ಕೊಲ್ಲಮೊಗ್ರದ ಪೋಸ್ಟ್ ಮಾಸ್ಟರ್ ಚಂದ್ರಶೇಖರ, ತಾಯಿ ಕಲಾವತಿ, ಸಹೋದರ ವಚನ್ ಹಾಗೂ ಕುಟುಂಬಸ್ಥರು ಸೇರಿದಂತೆ ಬಂಧು-ಮಿತ್ರರನ್ನು ಅಗಲಿದ್ದಾರೆ.