ನ್ಯೂಸ್ ನಾಟೌಟ್: ಮಾರ್ಚ್ 03 ರಂದು ರಾಷ್ಟ್ರವ್ಯಾಪಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದ ಅಂಗವಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಲಸಿಕೆ ನೀಡಲು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ,ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡರು.ಲಸಿಕೆಗಾಗಿ ಐದು ವರ್ಷದೊಳಗಿನ ಮಕ್ಕಳು ಲಸಿಕಾ ಬೂತ್ಗೆ ಬಂದು ಎರಡು ಹನಿ ಲಸಿಕೆ ಪಡೆದುಕೊಳ್ಳುವುದರ ಮೂಲಕ ಲಸಿಕಾ ಅಭಿಯಾನವು ಯಶಸ್ವಿಯಾಗಿ ನಡೆಯಿತು.