ನ್ಯೂಸ್ ನಾಟೌಟ್: ಸುಳ್ಯ ಭಾಗದಲ್ಲಿ ಅನೇಕ ಅಪಘಾತ ಪ್ರಕರಣಗಳು ಆಗಾಗ ನಡಿತಿದ್ದು, ಇದೀಗ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಡೆಗೆ ಹೋಗುವ ರಸ್ತೆ ಕೂಡ ಅಪಾಯಕಾರಿಯಾಗಿ ಪರಿಣಮಿಸಿ ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿದೆ.
ಇದಕ್ಕೆ ಕಾರಣ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಡೆಗೆ ಹೋಗುವ ಇಳಿಜಾರಿನಿಂದ ಕೂಡಿದ ಕೂಡು ರಸ್ತೆಯನ್ನು ಅಗೆದು ಪೈಪ್ ಲೈನ್ ಹಾಕಲಾಗಿದೆ. ಆ ಬಳಿಕ ರಸ್ತೆಯನ್ನು ಅರ್ಧಂಬರ್ಧ ಮುಚ್ಚಿ ಹೋಗಿದ್ದು, ಭಾರಿ ಸಮಸ್ಯೆಗಳು ಉಂಟಾಗಿವೆ. ಈ ಜಾಗದಲ್ಲಿ ಇದೀಗ ಹಲವು ಅಪಘಾತಗಳು ನಡೀತಾ ಇದ್ದು, ವಾಹನ ಸವಾರರಿಗೆ ಅಪಾಯಕಾರಿ ರಸ್ತೆಯಾಗಿ ಪರಿಣಮಿಸಿದೆ.
ಇನ್ನು ಈ ಭಾಗದಲ್ಲಿ ರಸ್ತೆಯಲ್ಲಿಯೇ ಜಲ್ಲಿ ಕಲ್ಲುಗಳು ಚೆಲ್ಲಾಪಿಲ್ಲಿಯಾಗಿ ಹರಡಿದ್ದು, ವಿಶೇಷವಾಗಿ ದ್ವಿಚಕ್ರ ವಾಹನ ಬಳಸುವವರಿಗೆ ಅಪಾಯದ ಮುನ್ಸೂಚನೆಯನ್ನು ತೋರಿಸುತ್ತಿದೆ.ಈ ರಸ್ತೆಯಲ್ಲಿ ಹೆಚ್ಚಾಗಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪ್ರಯಾಣಿಸುತ್ತಿದ್ದು, ಬಹಳ ಎಚ್ಚರಿಕೆಯಿಂದ ಸಂಚಾರ ಮಾಡಬೇಕಾಗಿದೆ.ಹೀಗಾಗಿ ಸಂಬಂಧ ಪಟ್ಟವರು ಕೂಡಲೇ ಇತ್ತ ಕಡೆ ಗಮನಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.