ನ್ಯೂಸ್ ನಾಟೌಟ್: ದೇಶದ ಬೆಳವಣಿಗೆಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಬಹಳ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ NMC ಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ರುದ್ರ ಕುಮಾರ್ ಎಮ್.ಎಮ್ ವಹಿಸಿದ್ದರು.ತಾಲೂಕು ಪಂಚಾಯತ್ ಸುಳ್ಯದ ಕಾರ್ಯನಿರ್ವಹಣಾಧಿಕಾರಿ ಮತ್ತು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಶ್ರೀ ಪರಮೇಶ ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ತಮ್ಮ ಹತ್ತಿರದ ಬೂತ್ ಗಳಿಗೆ ತೆರಳಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಕರ್ತವ್ಯವನ್ನು ಪಾಲಿಸಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಂತರ ಸಹಾಯಕ ಪ್ರಾಧ್ಯಾಪಕರು ಹಾಗೂ ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಶಿವಾನಂದ.ಜಿ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಮಾತನಾಡಿದ ಅವರು ಮತದಾನ ಜಾಗೃತಿಯ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ವಿಶೇಷ ಅಥಿತಿಗಳಾಗಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರತ್ನಾವತಿ.ಡಿ ಹಾಗೂ ಕಾರ್ಯಕ್ರಮದ ಸಂಯೋಜಕರು ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಮತದಾನ ಜಾಗೃತಿ ಸಂಚಾಲಕಿ ಡಾ. ಮಮತಾ ಕೆ ವಹಿಸಿದ್ದರು.
ಕಾಲೇಜಿನ ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿದರು. ಕಾರ್ಯಕ್ರಮದ ಸಂಯೋಜಕಿ ಡಾ.ಮಮತಾ.ಕೆ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ವರ್ಷಿಣಿ ಕಾರ್ಯಕ್ರಮ ನಿರೂಪಿಸಿದರು. ಎನ್ನೆಂಸಿ ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಕುಲದೀಪ್ ಪಿ.ಪಿ. ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಕಾಲೇಜಿನ ಇತರ ಸಿಬ್ಬಂದಿ ಪಾಲ್ಗೊಂಡಿದ್ದರು.