ನ್ಯೂಸ್ ನಾಟೌಟ್: ಮಂಡ್ಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಿರ್ಧಾರದ ಬಳಿಕ ಈಗ ಸಂಸದೆ ಸುಮಲತಾ ಭೇಟಿಯಾಗಿದ್ದಾರೆ.
ಬೆಂಗಳೂರಿನಲ್ಲಿರುವ ನಿವಾಸದಲ್ಲಿ ಸುಮಲತಾರನ್ನ ಭೇಟಿಯಾಗಿ ಮೈತ್ರಿ ಬೆಂಬಲಿಸುವಂತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸುಮಲತಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಡಿಕೆ, ಇವತ್ತಿನ ಮಾತುಕತೆ ಸೌಹಾರ್ದಯುತವಾಗಿ ಆಗಿದೆ. ಮಾತುಕತೆ ವೇಳೆ ಯಾವುದೇ ಷರತ್ತು ಹಾಕಿಲ್ಲ, ನಮಗೆ ಬೆಂಬಲ ನೀಡುವಂತೆ ಕೋರಿದ್ದೇವೆ. ಅವರ ನಿರ್ಧಾರವನ್ನು ಕಾರ್ಯಕರ್ತರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಅಂಬರೀಷ್ ಮನೆ ನನಗೆ ಹೊಸದಲ್ಲ. ಸುಮಲತಾ ಅಕ್ಕ ಅವರ ಸಹಕಾರ ಕೋರಿದ್ದೇನೆ, ಮಂಡ್ಯದಲ್ಲಿ ತೀರ್ಮಾನ ಪ್ರಕಟ ಮಾಡ್ತೀನಿ ಅಂತ ಅವರೇ ಹೇಳಿದ್ದಾರೆ. ಅವರು ಬಿಜೆಪಿ ಜೊತೆ ಒಳ್ಳೆಯ ಬಾಂಧವ್ಯ ಇಟ್ಟುಕೊಂಡಿದ್ದಾರೆ. ವಿಜಯೇಂದ್ರ ಅವರ ಜೊತೆ ಹಲವು ವಿಚಾರಗಳನ್ನ ಚರ್ಚಿಸಿದ್ದಾರೆ. ಎಲ್ಲಾ ಮುಕ್ತವಾಗಿ ಚರ್ಚೆ ಮಾಡಿದ ಬಳಿಕ ನಿರ್ಧಾರ ಪ್ರಕಟಿಸುತ್ತೇನೆ. ಏಪ್ರಿಲ್ 4ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.