ನ್ಯೂಸ್ ನಾಟೌಟ್ : ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ಸಿಕ್ಕಿದೆ. ಮಾರ್ಚ್ 12ರಿಂದ ವಿಸ್ತರಣೆಗೊಂಡ ರೈಲು ಸಂಚಾರ ಆರಂಭವಾಗಲಿದೆ.ಈ ವೇಳಾಪಟ್ಟಿಯನ್ನು ಈಗಾಗ್ಲೇ ಪ್ರಕಟಿಸಲಾಗಿದೆ.ರೈಲ್ವೆ ಸಚಿವಾಲಯ ಕಾಸರಗೋಡು-ತಿರುವನಂತಪುರಂ-ಕಾಸರಗೋಡು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮಂಗಳೂರು ಸೆಂಟ್ರಲ್ ತನಕ ವಿಸ್ತರಣೆ ಮಾಡಲು ಒಪ್ಪಿಗೆ ನೀಡಿತ್ತು.
ಈ ಕುರಿತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದು, ‘ನಮ್ಮ ಮನವಿಯ ಮೇರೆಗೆ ಮಂಗಳೂರಿನವರೆಗೂ ವಿಸ್ತರಣೆ ಮಾಡಲಾದ ತಿರುವನಂತಪುರ-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಇದೇ ಮಾರ್ಚ್ 12ರಂದು ಬೆಳಗ್ಗೆ 8 ಗಂಟೆಗೆ ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ಪ್ರಧಾನಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ’ ಎಂದು ಹೇಳಿದ್ದಾರೆ.’ಇದೇ ಸಂದರ್ಭದಲ್ಲಿ ಮಂಗಳೂರು ಕೇಂದ್ರ ರೈಲು ನಿಲ್ದಾಣ ಹಾಗೂ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪ್ರಾರಂಭಿಸಲಿರುವ ‘ಒನ್ ಸ್ಟೇಷನ್- ಒನ್ ಪ್ರಾಡಕ್ಟ್’ ಮಳಿಗೆಗಳಿಗೂ ಮೋದಿಯವರು ಚಾಲನೆ ನೀಡಲಿದ್ದಾರೆ’ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಕೇರಳ ನಡುವೆ ಪ್ರತಿದಿನ ಸಾವಿರಾರು ಜನರು ಸಂಚಾರ ನಡೆಸುತ್ತಾರೆ.ವಂದೇ ಭಾರತ್ ರೈಲು ಸಂಚಾರದಿಂದ ಪ್ರಯಾಣಿಕರಿಗೆ ಸಹಕಾರಿಯಾಗಲಿದೆ.ಮಂಗಳೂರು-ತಿರುವನಂತಪುರಂ ನಡುವಿನ ವಂದೇ ಭಾರತ್ ರೈಲು ಬುಧವಾರ ಹೊರತು ಪಡಿಸಿ ವಾರದ 6 ದಿನಗಳ ಕಾಲ ಸಂಚಾರ ನಡೆಸಲಿದೆ. ಮಂಗಳೂರಿನಿಂದ ಬೆಳಗ್ಗೆ 6.15ಕ್ಕೆ ಹೊರಡುವ ರೈಲು ಮಧ್ಯಾಹ್ನ 3.05ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರು ತಲುಪಲಿದೆ ಎಂಬ ಮಾಹಿತಿ ನೀಡಲಾಗಿದೆ.