ನ್ಯೂಸ್ ನಾಟೌಟ್ : ಹೊರಗಡೆ ಹೋಗುವಂತಿಲ್ಲ. ಸುಡು ಬಿಸಿಲು..ತಡೆದುಕೊಳ್ಳಲಾಗದಷ್ಟು ದಾಹ.. ಇದರ ಮಧ್ಯೆ ನೀರಿಗಾಗಿ ಹಾಹಾಕಾರ.. ಹೌದು, ಸದ್ಯ ಪರಿಸ್ಥಿತಿ ಹಾಗೆಯೇ ಇದೆ.ಎತ್ತ ನೋಡಿರತ್ತ ಜನ ನೀರಿನ ಬಗ್ಗೆಯೇ ಮಾತನಾಡಿಕೊಳ್ಳುತ್ತಿದ್ದಾರೆ.ಅಲ್ಲಲ್ಲಿ ನೀರಿನ ಸಮಸ್ಯೆಗಳು ಉಲ್ಬಣಗೊಂಡಿದ್ದು ಇನ್ನೂ ಮಳೆ ಬರೋದಕ್ಕೆ ಮೂರು ತಿಂಗಳು ಇದೆಯಲ್ಲಪ್ಪಾ ಎನ್ನುತ್ತಿದ್ದಾರೆ.
ಇಡೀ ಬೆಂಗಳೂರಿಗೆ ನೀರಿನ ಆಸರೆಯಾಗಿದ್ದ ಕಾವೇರಿ ನದಿಯಲ್ಲೇ ನೀರಿಲ್ಲ ಎನ್ನುವ ಕೂಗು ಕೇಳಿ ಬಂದಿದೆ. ಬೆಂಗಳೂರಿನ ಕಚೇರಿ, ಅಪಾರ್ಟ್ಮೆಂಟ್, ಮನೆಗಳಲ್ಲಿನ ನೂರಾರು ಬೋರ್ವೆಲ್ಗಳು ಬತ್ತಿ ಹೋಗಿವೆ. ಹೀಗಾಗಿ, ಬೇಸಿಗೆ ಆರಂಭದಲ್ಲೇ ಕಾವೇರಿ ನೀರು ಮತ್ತು ಟ್ಯಾಂಕರ್ ನೀರಿನ ಮೇಲೆ ಅವಲಂಬನೆ ಹೆಚ್ಚಾಗಿದೆ. ಮತ್ತೊಂದೆಡೆ ಸಮರ್ಪಕವಾಗಿ ನೀರಿನ ಪೂರೈಕೆಯಾಗದೆ ನೀರಿನ ಕೊರತೆಯ ಬಿಸಿ ಎಲ್ಲ ಕಚೇರಿ, ಅಪಾರ್ಟ್ಮೆಂಟ್ಗಳನ್ನು ಬಾಧಿಸುತ್ತಿದೆ.
ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿದರೆ ನೀರಿನ ಸಮಸ್ಯೆ ಸುಧಾರಿಸುವವರೆಗೂ ಎಲ್ಲರಿಗೂ ಅನುಕೂಲವಾಗುವುದು ಎಂದು ಉದ್ಯೋಗಿಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು ಐಟಿ ಉದ್ಯೋಗಿಗಳಿಗೆ ನೀರಿನ ಸಮಸ್ಯೆ ನಿಯಂತ್ರಣಕ್ಕೆ ಬರುವವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಅಂಗಳಾಚಿದ್ದಾರೆ. ಇದರಿಂದ ನಗರದ ಕಚೇರಿಗಳಲ್ಲಿನ ನೀರಿನ ಬೇಡಿಕೆ ಕಡಿಮೆಯಾಗುತ್ತದೆ’ ಎಂದು ಪರಿಸರ, ನೀರಿನ ಸಂರಕ್ಷಣೆಯಲ್ಲಿ ತೊಡಗಿರುವ ಸಾಮಾಜಿಕ ಕಾರ್ಯಕರ್ತ ಸಂದೀಪ್ ಅನಿರುದ್ದನ್ ಅಭಿಪ್ರಾಯಪಟ್ಟಿದ್ದಾರೆ.ಮನೆಯಿಂದ ಕೆಲಸ ಮಾಡುವುದರಿಂದ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎನಿಸುವುದಿಲ್ಲ. ಆದರೆ ಉದ್ಯೋಗಿಗಳು ನೀರಿನ ಸಮಸ್ಯೆ ಇಲ್ಲದ ಊರುಗಳಿಂದ ಕೆಲಸ ಮಾಡುವುದಾದರೆ ಅನುಕೂಲ ಆಗಬಹುದು’ ಎಂದು ಸ್ಟಾರ್ಟ್ಅಪ್ ಕಂಪನಿ ನಡೆಸುತ್ತಿರುವ ಚಂದ್ರಕಾಂತ್ ಅಭಿಪ್ರಾಯಪಟ್ಟರು.
ಮನೆಯಿಂದ ಕೆಲಸ ಮಾಡಿದರೆ ಅನುಕೂಲ. ಕಚೇರಿಗಳಿಗೆ ಹೋಲಿಸಿದರೆ ಮನೆಯಲ್ಲಿನ ನೀರಿನ ಬಳಕೆ ಮಿತವಾಗಿರುತ್ತದೆ. ಆದರೆ ಮನೆಯಲ್ಲಿಯೂ ನೀರಿನ ಸಮಸ್ಯೆ ಇದ್ದರೆ ಏನು ಮಾಡುವುದು? ನಮ್ಮ ಅಪಾರ್ಟ್ಮೆಂಟ್ಗೆ ಕಳೆದ ಮೂರು ದಿನಗಳಿಂದ ಕಾವೇರಿ ನೀರು ಬಂದಿಲ್ಲ.ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ವಿನೋದ್ ರಾಜ್ ಎಂಬುವವರು,’ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಾಪಸ್ ಕಚೇರಿಗೆ ಎಳೆದು ತರಲು ಒಂದು ವರ್ಷ ಬೇಕಾಯಿತು. ಆದರೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿಂದ ಮತ್ತೆ ಮನೆಯಿಂದ ಕೆಲಸಕ್ಕೆ ಅವಕಾಶ ಕಲ್ಪಿಸುವ ಪರಿಸ್ಥಿತಿ ಎದುರಾಗಿದೆ; ಎಂದು ಮಾರ್ಮಿಕವಾಗಿ ಬರೆದು ಪೋಸ್ಟ್ ಮಾಡಿದ್ದಾರೆ.