ನ್ಯೂಸ್ ನಾಟೌಟ್: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹಿನ್ನಲೆಯಲ್ಲಿ ಎಪ್ರಿಲ್ ಒಂದೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ೩ ಭಾರಿ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗವಿಸಿದ್ದಾರೆ. ೪ನೇ ಭಾರಿಗೆ ಉತ್ತರ ಕರ್ನಾಟಕಕ್ಕೂ ಆಗಮಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎಪ್ರಿಲ್ 28 ಹಾಗೂ 29 ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ಕ್ಯಾಂಪೇನ್ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ.
ಎಪ್ರಿಲ್ 28 ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್ಕಮ್, ಮೇರಿಯಟ್, ಯುಕೆ-27 ಯಾವುದಾರು ಒಂದು ಹೊಟೇಲ್ನಲ್ಲಿ ತಂಗಲಿದ್ದಾರೆ. ಎಸ್ಪಿಜಿ ಪರಿಶೀಲನೆ ಬಳಿಕ ಹೊಟೇಲ್ ನಿಗದಿಯಾಗಲಿದೆ. ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ ಎನ್ನಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಗೆಲವು ಸಾಧಿಸಿತ್ತು. ಇದನ್ನು ಹೀಗೆ ಮುಂದುವರೆಸಲು ಉತ್ತರ ಕರ್ನಾಟಕ ಭಾಗಕ್ಕೆ ನರೇಂದ್ರ ಮೋದಿ ಬರಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಭಾಗದಲ್ಲಿ ಬಿಜೆಪಿಯನ್ನು ಇನ್ನಷ್ಟು ಸುಭದ್ರಗೊಳಿಸಲು ಪ್ರಧಾನಿ ಮೋದಿ ಕಹಳೆ ಊದಲಿದ್ದಾರೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಈ ಮಧ್ಯೆ ಮೋದಿ ಭೇಟಿ ಚರ್ಚೆಯಾಗುತ್ತಿದೆ.