ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಜೋರಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಂಚು ಹಾಕುವ ಕಳ್ಳರ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಪೊಲೀಸ್ ಇಲಾಖೆ ಎಚ್ಚರಿಸುತ್ತಿದ್ದರೂ ಕಳ್ಳತನ ಪ್ರಕರಣಗಳು ಮಾತ್ರ ನಿಲ್ಲುತ್ತಲೇ ಇಲ್ಲ. ಅಂತೆಯೇ ಕಳ್ಳ-ಕಳ್ಳಿ ಸೇರಿಕೊಂಡು ಭಾಗಮಂಡಲದ ಅಯ್ಯಂಗೇರಿ ಗ್ರಾಮದ ಮನೆಯೊಂದಕ್ಕೆ ನುಗ್ಗಿ ಬೆಲೆ ಬಾಳುವ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಏ.12ರಂದು ದುರ್ಘಟನೆ ನಡೆದಿದೆ. ಅಂದು ಮನೆಯ ಒಡತಿ ಜಲೀನಾ ಕೆ.ಹೆಚ್ ಮನೆಗೆ ಬೀಗ ಹಾಕಿಕೊಂಡು ಸಂಬಂಧಿಕರ ಮನೆಗೆ ತೆರಳಿದ್ದರು. ಅವರು ಮರಳಿ ಏ.13ರಂದು ವಾಪಸ್ ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಸ್ಥಳಕ್ಕೆ ಬಂದ ಭಾಗಮಂಡಲ ಪೊಲೀಸರು 232 ಗ್ರಾಂ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮಾಹಿತಿ ನೀಡಿದರು. ವಿಶೇಷ ತಂಡವನ್ನು ರಚಿಸಿದ ಪೊಲೀಸರು ಆರೋಪಿಗಳನ್ನು ಏ.16ರಂದು ವಶಕ್ಕೆ ಪಡೆದುಕೊಂಡಿದ್ದಾರೆ.