ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಏ 4ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪಕ್ಷದ ಎಲ್ಲ ಶಾಸಕರೂ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಇರಲಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್, ರಾಜ್ಯ ಚುನಾವಣ ಸಂಚಾಲಕ ಸುನಿಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಎ.5ರಂದು ಪ್ರಚಾರ ಸಭೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹಿತ ಹಿರಿಯ ರಾಷ್ಟ್ರೀಯ ಮುಖಂಡರನ್ನು ಆಹ್ವಾನಿಸಲಾಗಿದೆ, ಮನೆ ಮನೆಗೆ ಕಾರ್ಯಕರ್ತರು ತೆರಳಿ ಪ್ರಚಾರ ಅಭಿಯಾನ ನಡೆಸಲಿದ್ದಾರೆ. ಏ. 21ರಂದು ನಡೆಯುವ ಮಹಾ ಸಂಪರ್ಕ ಅಭಿಯಾನದಲ್ಲಿ ಏಕಕಾಲದಲ್ಲಿ ಎಲ್ಲ ಮನೆಗಳನ್ನೂ ತಲುಪಲಾಗುವುದು ಎಂದು ತಿಳಿಸಿದರು.