ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಪ್ರಚಾರದ ಜೊತೆಗೆ ಪಕ್ಷಾಂತರ ಹೆಚ್ಚಾಗಿದೆ. ಡಿಸಿಎಂ ಡಿ ಕೆ ಶಿವಕುಮಾರ್ ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಸದ್ದಿಲ್ಲದೆ ಕಳೆದ ರಾತ್ರಿ(ಎ.11) ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ ಸೇರಿದಂತೆ ಬರೋಬ್ಬರಿ 400 ಕ್ಕೂ ಮುಖಂಡರನ್ನು ಡಿ ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದು, ದಳಪತಿಗಳಿ ಬಿಗ್ ಶಾಕ್ ನೀಡಿದ್ದಾರೆ.
ಪಕ್ಷದ ಶಾಲು, ಧ್ವಜ ನೀಡಿ ಬರಮಾಡಿಕೊಂಡ ಡಿ ಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ ಸೇರಿದಂತೆ ನಾಯಕರು ಹಾಗೂ ಕಾರ್ಯಕರ್ತರನ್ನು ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷಕ್ಕೆ ಡಿ ಕೆ ಶಿವಕುಮಾರ್ ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಬರಮಾಡಿಕೊಂಡರು. ಬಳಿಕ ಮಾತನಾಡಿದ ಶಿವಕುಮಾರ್, ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ ಎಂದು ಪ್ರಶ್ನಿಸಿದರು.
ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ ಸ್ಥಿತಿ ತಲುಪಿದೆ. ಈಗ ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿದವರನ್ನೇ ಕರೆದುಕೊಂಡು ಒಕ್ಕಲಿಗರ ಮಠಕ್ಕೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ತಮ್ಮ ಪಕ್ಷದ ಕಾರ್ಯಕರ್ತರಿಗೆ ಒಂದು ಸಣ್ಣ ಅಧಿಕಾರವನ್ನಾದರೂ ಕೊಟ್ಟರಾ? ಅಧಿಕಾರ ಇದ್ದಾಗಲೇ ಏನು ಮಾಡಲಿಲ್ಲ. ಕಾರ್ಯಕರ್ತರು ಇಲ್ಲದೆ ಯಾವ ಪಕ್ಷ ಇರಲು ಸಾಧ್ಯ ಎಂದು ಪ್ರಶ್ನಿಸಿದರು.