ನ್ಯೂಸ್ ನಾಟೌಟ್: ಡಿಫರೆಂಟ್ ಮ್ಯಾನರಿಸಂನೊಂದಿಗೆ ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿರುವ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಕಾರ್ಯಕರ್ತರ ಭಾರಿ ಬೆಂಬಲದೊಂದಿಗೆ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಶಿಷ್ಯನ ಗೆಲುವಿಗೆ ಹಾರೈಸಿದ ಪೂಜಾರಿ ಪದ್ಮರಾಜ್ ಅವರು ನಾಮಪತ್ರ ಸಲ್ಲಿಕೆ ಮಾಡುವ ಮೊದಲು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಮುಂಭಾಗದಿಂದ ಆರಂಭವಾದ ಮೆರವಣಿಗೆಯಲ್ಲಿ ಪಾಲ್ಗೊಂಡರು. ಶಿಷ್ಯನ ಮೆರವಣಿಗೆಗೆ ಕೇಂದ್ರ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ದ.ಕ ಜಿಲ್ಲಾ ಉಸ್ತವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಆದ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಜೆ.ಆರ್.ಲೋಬೋ, ಮುಖಂಡ ಇನಾಯತ್ ಅಲಿ ಸಹಿತ ಹಲವರು ಭಾಗವಹಿಸಿದ್ದರು.