ನ್ಯೂಸ್ ನಾಟೌಟ್: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜೆಡಿಎಸ್ ಈ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗುತ್ತಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆಯೇ ಇನ್ನಷ್ಟು ಅನಾಹುತ ನಿಯಂತ್ರಿಸಲು ತುರ್ತು ಆದೇಶವನ್ನು ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ನಾಳೆ(ಎ.30) ಜೆಡಿಎಸ್ ಪಕ್ಷದ ಕೋರ್ ಕಮಿಟಿ ಮೀಟಿಂಗ್ ಕೆರೆದಿದ್ದು, ಮೀಟಿಂಗ್ ನ ನಿರ್ಧಾರದ ಮೇಲೆ ಆದೇಶ ಮಾಡಲಾಗುವುದು ಎನ್ನಲಾಗಿದೆ.