ನ್ಯೂಸ್ ನಾಟೌಟ್ :ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿಂದ ವರದಿಯಾಗಿದೆ.ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಈ ವೇಳೆಯೇ ಯುವಕ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.ಬಳಿಕ ಈ ವಿಷಯ ಮನೆಯವರಿಗೆ ತಿಳಿಯಿತು. ಆ ವೇಳೆಗೆ ಯುವಕ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.