ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಹಿಜಾಬ್ ಗಲಾಟೆ ರಾಜ್ಯದಲ್ಲಿ ಭಾರಿ ತಾರಕಕ್ಕೇರಿರುವುದು ಎಲ್ಲರಿಗೂ ಗೊತ್ತಿದೆ. ಕರ್ನಾಟಕದ ಈ ಗಲಾಟೆ ರಾಷ್ಟ್ರ ಮಟ್ಟದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ತೆಲಂಗಾಣದಲ್ಲಿ ಶಾಲಾ ವಿದ್ಯಾರ್ಥಿಗಳು ಕೇಸರಿ ಬಟ್ಟೆ ಹಾಕಿ ಬಂದಿದ್ದಕ್ಕೆ ಪ್ರಾಂಶುಪಾಲ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಈ ವಿಚಾರ ಭಾರಿ ಗಲಾಟೆಗೆ ಕಾರಣವಾಗಿದೆ. ಹಿಂದೂ ಕಾರ್ಯಕರ್ತರು ಶಾಲೆಯ ಮೇಲೆ ದಾಳಿ ಮಾಡಿದ್ದಾರೆ. ಶಾಲೆ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ.
ಕನ್ನೆಪಳ್ಳಿ ಎಂಬ ಗ್ರಾಮದಲ್ಲಿರುವ ಬ್ಲೆಸ್ಡ್ ಮದರ್ ತೆರೆಸಾ ಹೈ ಸ್ಕೂಲ್ನಲ್ಲಿ ಕೆಲ ದಿನಗಳಿಂದ ವಿದ್ಯಾರ್ಥಿಗಳು ಕೇಸರಿ ಬಟ್ಟೆ ಧರಿಸಿ ತರಗತಿಗಳಿಗೆ ಆಗಮಿಸಿದ್ದಾರೆ. ಇದೇ ವೇಳೆ, ಶಾಲೆಯ ಪ್ರಾಂಶುಪಾಲ, ಕೇರಳದ ಮೂಲದ ಜೈಮೊನ್ ಜೋಸೆಫ್ ಅವರು ವಿದ್ಯಾರ್ಥಿಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಮ್ಮ ತಂದೆ-ತಾಯಿಯನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ಗದರಿದ್ದಾರೆ. ಹನುಮಾನ್ ದೀಕ್ಷೆ ಇರುವ ಕಾರಣ 21 ದಿನ ಕೇಸರಿ ಬಟ್ಟೆ ಧರಿಸುವುದು ಸಂಪ್ರದಾಯ ಎಂದರೂ ಕೇಳದೆ ಪ್ರಾಂಶುಪಾಲ ಗದರಿದ್ದಾರೆ.