ನ್ಯೂಸ್ ನಾಟೌಟ್: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ನ ಯುವರಾಜ ರಾಹುಲ್ ಗಾಂಧಿ (Rahul Gandhi) ಕೇರಳದ ವಯನಾಡ್ನಿಂದ ಎರಡನೇ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ. ಕಳೆದ ಬಾರಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದ ಅವರು ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರು, ಬೆಂಬಲಿಗರ ಸಮೂಹದಲ್ಲಿ ವಯನಾಡಿನ ಕಲ್ಪೆಟ್ಟಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಎಂಎಂ ಹಾಸನ್, ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಇತರ ರಾಜ್ಯ ನಾಯಕರು ಸಾಥ್ ನೀಡಿದರು. ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಅವರು ಸಂಸತ್ನಲ್ಲಿ ವಯನಾಡ್ ಪ್ರತಿನಿಧಿಸುವುದು ಗೌರವ ತಂದಿದೆ.
ನಾನು ಚುನಾಯಿತ ಪ್ರತಿನಿಧಿಯಲ್ಲ. ನಾನು ನಿಮ್ಮ ಕುಟುಂಬ ಸದಸ್ಯನಂತೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಹೇಗೆ ನೋಡುತ್ತೇನೆ ಹಾಗೇಯೇ ನಾನು ನಿಮ್ಮನ್ನು ನೋಡುತ್ತೇನೆ. ಹೀಗಾಗೀ ಕ್ಷೇತ್ರದಲ್ಲಿ ತಂದೆ-ತಾಯಿ ಸಹೋದರಿಯರಿದ್ದಾರೆ ಎಂದರು. ಕ್ಷೇತ್ರದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ರಾಷ್ಟ್ರ ಹಾಗೂ ವಿಶ್ವದ ಗಮನಕ್ಕೆ ತರಲು ನಾನು ಸದಾ ಸಿದ್ಧ. ಮನುಷ್ಯ-ಪ್ರಾಣಿ ಸಂಘರ್ಷ, ವೈದ್ಯಕೀಯ ಕಾಲೇಜು ಸಮಸ್ಯೆಗಳು ಈ ಹೋರಾಟದಲ್ಲಿ ನಾನು ವಯನಾಡು ಜನರೊಂದಿಗೆ ನಿಲ್ಲುತ್ತೇನೆ. ನಾವು ವೈದ್ಯಕೀಯ ಕಾಲೇಜಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದೇವೆ. ನಾನು ಸಿಎಂಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.