ನ್ಯೂಸ್ ನಾಟೌಟ್: ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಶನಿವಾರ(ಮೇ.18) ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ ಎಂದು ವರದಿ ತಿಳಿಸಿದೆ. ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ವಿಮಾನಯಾನ ಸಂಸ್ಥೆ ದೃಢ ಪಡಿಸಿದೆ.
ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ರಕ್ಷಿಸಿ, ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು ಎನ್ನಲಾಗಿದೆ. ಐಎಕ್ಸ್ 1132 ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 11.12 ಕ್ಕೆ ಇಳಿಯಿತು, ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಒಳಗಿನ ಸಿಬ್ಬಂದಿ ಬಲ ಇಂಜಿನ್ ನಲ್ಲಿ ಬೆಂಕಿಯನ್ನು ಗಮನಿಸಿ ಏರ್ ಟ್ರಾಫಿಕ್ ಕಂಟ್ರೋಲರ್ (ಎಟಿಸಿ) ಗೆ ವರದಿ ಮಾಡಿದರು ಎಂದು ಪ್ರಕಟಣೆ ತಿಳಿಸಿದೆ. ಪೂರ್ಣ-ಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು; ಇಳಿದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎನ್ನಲಾಗಿದೆ.
Click 👇