ನ್ಯೂಸ್ ನಾಟೌಟ್: ಮಹಿಳೆಯರ ವಿಡಿಯೋ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ಈಗ ಸಂಕಷ್ಟಗಳ ಸುರಿಮಳೆ ಆರಂಭವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಸೆರೆಗೆ ಎಸ್ ಐ ಟಿ ಸರ್ಜಿಕಲ್ ಸ್ಟ್ರೈಕ್ ಆರಂಭಿಸಿದಂತಿದೆ. ಇದೀಗ ಹೊಳೆ ನರಸೀಪುರ ಕೇಸಿನಲ್ಲಿ ಪ್ರಜ್ವಲ್ ಬಂಧನಕ್ಕೆ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಮಾತ್ರವಲ್ಲ ಪಾಸ್ ಪೋರ್ಟ್ ಕ್ಯಾನ್ಸಲ್ ಮಾಡುವುದಕ್ಕೆ ಆದೇಶ ಹೊರಡಿಸಲಾಗಿದೆ. ನಗರದ 42ನೇ ಎಸಿಎಂಎಂ ಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್ ಗಳ ಬಗ್ಗೆ ಕೋರ್ಟ್ ಮಾಹಿತಿ ಕೇಳಿತ್ತು. ಈ ವೇಳೆ ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಎಸ್ ಐಟಿ ಮಾಹಿತಿಯನ್ನು ನೀಡಿದೆ. ಮಾತ್ರವಲ್ಲ ಬಂಧನಕ್ಕೆ ಚಾರ್ಜ್ ಶೀಟ್ ಅಗತ್ಯವಿಲ್ಲ ಎಂದು ಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟಿದೆ, ಇದನ್ನು ಊರ್ಜಿತಗೊಳಿಸಿ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಸದ್ಯ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್ಐಟಿ ಲುಕ್ ಔಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು. ಇದೀಗ ಅರೆಸ್ಟ್ ವಾರಂಟ್ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್ ಕಾರ್ನರ್ ನೋಟಿಸ್ ಬಳಿಕ ಪ್ರಜ್ವಲ್ ಪಾಸ್ಪೋರ್ಟ್ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ.
- +91 73497 60202
- [email protected]
- November 22, 2024 11:34 PM