ನ್ಯೂಸ್ ನಾಟೌಟ್: ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಮೇ.27ಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇಂದು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಮಗ ವಿಡಿಯೋ ಮೂಲಕ ಪ್ರತ್ಯಕ್ಷವಾಗಿ ತಾನು ಡಿಪ್ರೆಷನ್ ಗೆ ಹೋಗಿದ್ದೆ ಮತ್ತು ಇದು ರಾಜಕೀಯ ಪಿತೂರಿ, ವಿಚಾರಣೆಗೆ ಮೇ.31 ರಂದು ಹಾಜರಾಗುವುದಾಗಿ ಹೇಳಿದ್ದು, ಈ ಬೆನ್ನಲ್ಲೆ ಭವಾನಿ ರೇವಣ್ಣ ಜಾಮೀನು ಕೋರಿ ಅರ್ಜಿ ಹಾಕಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಗೆ ಬರಬೇಕಿದೆ. ಈಗಾಗಲೇ ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣಗೆ ಎಸ್ಐಟಿ ಪೊಲೀಸರು ನೋಟಿಸ್ ನೀಡಿದ್ದರು. ಅಲ್ಲದೆ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಪಾತ್ರ ಇರುವ ಕುರಿತು ಮಾಹಿತಿ ಆಧಾರ ಮೇಲೆ ಎಸ್ಐಟಿ ಪೊಲೀಸರು ತನಿಖೆ ನಡೆಸುತ್ತಿದ್ದರು.
Click 👇