ನ್ಯೂಸ್ ನಾಟೌಟ್: ಸುಳ್ಯ ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ನೂತನ ಆಡಳಿತಾಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕಗೊಂಡಿದ್ದಾರೆ.
ಮಂಗಳವಾರ ( ಮೇ28) ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ. ಸಿ. ಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜವಾಬ್ದಾರಿ ವಹಿಸಿಕೊಂಡರು.
ಚಂದ್ರಶೇಖರ್ ಪೇರಾಲು ಅವರು ಈ ಹಿಂದೆ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ. ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.