ನ್ಯೂಸ್ ನಾಟೌಟ್: ಅನಧಿಕೃತವಾಗಿ ನಡೆಸುತ್ತಿದ್ದ ಕೋಚಿಂಗ್ ಸೆಂಟರ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.ಲಿಂಗಸೂಗೂರು ಎಸಿ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್ ಸೆಂಟರ್ಗಳ ಮೇಲೆ ದಾಳಿ ನಡೆಸಿದ್ದಾರೆ.
ಸೋಮವಾರದೊಳಗಾಗಿ ಎಲ್ಲಾ ಕೋಚಿಂಗ್ ಸೆಂಟರ್ಗಳು ಬಂದ್ ಆಗಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.ಎಲ್ಲಾ ಕೇಂದ್ರಗಳನ್ನು ಬಂದ್ ಮಾಡಿದ ಮಕ್ಕಳನ್ನು ತಮ್ಮ ತಮ್ಮ ಪೋಷಕರ ಬಳಿ ಕಳುಹಿಸಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಎಚ್ಚರಿಕೆ ನೀಡಿದ್ದಾರೆ.
ಅನಧಿಕೃತ ಕೋಚಿಂಗ್ ಸೆಂಟರ್ ಗಳು ವಸತಿ ಸಹಿತವಾಗಿದ್ದರೆ, ಇನ್ನೂ ಕೆಲವು ವಸತಿ ರಹಿತವಾಗಿ ನಡೆಸುತ್ತಿದ್ದದ್ದು ಪತ್ತೆಯಾಗಿದೆ. ಹಾಗಾಗಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೋಮವಾರದ(ಮೇ.20) ಒಳಗೆ ಕೋಚಿಂಗ್ ಸೆಂಟರ್ಗಳನ್ನು ಬಂದ್ ಮಾಡುವಂತೆ ಸೂಚಿಸಿದೆ. ಈ ಕ್ರಮಗಳನ್ನು ಶಿಕ್ಷಣ ಇಲಾಖೆ ರಾಜ್ಯದಾದ್ಯಂತ ನಡೆಸಲು ಮುಂದಾಗಿದೆ ಎನ್ನಲಾಗಿದೆ.
Click 👇