ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದ ರೇವಣ್ಣ, ಜಾಮೀನು ಪಡೆದ ಬಳಿಕ ಪ್ರತಿನಿತ್ಯ ಪುಣ್ಯ ಕ್ಷೇತ್ರಗಳ ದರ್ಶನ

ನ್ಯೂಸ್ ನಾಟೌಟ್: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀಮಂಜುನಾಥ ಸ್ವಾಮಿಯ ದರ್ಶನ‌ ಪಡೆದಿದ್ದಾರೆ. ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. “ತಾನು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಭಕ್ತ. ಸದಾ ಸ್ವಾಮಿಯ ದರ್ಶನಕ್ಕೆ ಬರುತ್ತಿರುತ್ತೇನೆ. ಆದ್ದರಿಂದ ಇಂದೂ ಕೂಡಾ ಬಂದಿದ್ದೇನೆ. ಕಳೆದ 40 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ.‌ 25 ವರ್ಷಗಳ ಕಾಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ. ದೇವರ ಬಗ್ಗೆಯೂ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ರೇವಣ್ಣ ಈ ವೇಳೆ ಪ್ರತಿಕ್ರಿಯಿಸಿದ್ದಾರೆ. ಜಾಮೀನು ಪಡೆದ ಬಳಿಕ ಸತತವಾಗಿ, ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ಶೃಂಗೇರಿಯ ಶ್ರೀ ಶಾರದಾಂಬಾ ಪೀಠ, ಬೆಂಗಳೂರಿನ ಜೆಪಿ ನಗರದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ, ಆದಿಚುಂಚನಗಿರಿ ಮಠ ಸೇರಿದಂತೆ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. Click 👇